PRABHAVAA.COM

ಬರ ನಿರ್ವಹಣೆಗೆ ಪೂರಕ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ನೀಡಿ: ಡಾ. ಅಜಯ್ ಧರ್ಮಸಿಂಗ್ ಮನವಿ

Bengaluru Urban:

Font size:

ಬರ ನಿರ್ವಹಣೆಗೆ ಪೂರಕ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ನೀಡಿ: ಡಾ. ಅಜಯ್ ಧರ್ಮಸಿಂಗ್ ಮನವಿ

- ತುರ್ತು ಸಣ್ಣ ನೀರಾವರಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ಒದಗಿಸಲು ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಅತೀಕ್ ಅವರೊಂದಿಗೆ ಸಮಾಲೋಚನೆ
- SCP–TSP ಯೋಜನೆಯಡಿ ಹೆಚ್ಚುವರಿ ಅನುದಾನ ಬಿಡುಗಡೆಗೂ ಮನವಿ
- ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಸೌಲಭ್ಯ ಕಲ್ಪಿಸಿ ಕೃಷಿಗೆ ನೆರವಾಗಲು ಒತ್ತು

ಬೆಂಗಳೂರು, ಅಕ್ಟೋಬರ್ 27: ರಾಜ್ಯದ ಹಲವು ಜಿಲ್ಲೆಗಳಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹಾಗೂ ತುರ್ತು ಸಣ್ಣ ನೀರಾವರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮುಂಬರುವ ಪೂರಕ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ಒದಗಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ಮನವಿ ಮಾಡಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಅತೀಕ್ ಅವರನ್ನು ಭೇಟಿ ಮಾಡಿದ ಸಚಿವರು, ರಾಜ್ಯದ ವಿವಿಧ ಭಾಗಗಳಿಂದ ಶಾಸಕರು ಸಲ್ಲಿಸಿರುವ ಸಣ್ಣ ನೀರಾವರಿ ಕಾಮಗಾರಿಗಳ ಬೇಡಿಕೆಗಳು, ನೀರಿನ ಸಂಗ್ರಹಣೆ, ಬರ ನಿರ್ವಹಣೆ ಹಾಗೂ ತುರ್ತು ನೀರಾವರಿ ಮೂಲಸೌಕರ್ಯ ಕಾಮಗಾರಿಗಳಿಗೆ ಅಗತ್ಯವಿರುವ ಅನುದಾನದ ಕುರಿತು ಸಮಾಲೋಚನೆ ನಡೆಸಿದರು.

“ರಾಜ್ಯದ ಹಲವು ಜಿಲ್ಲೆಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಂಗ್ರಹಣೆ ಮತ್ತು ಸಣ್ಣ ನೀರಾವರಿ ಮೂಲಸೌಕರ್ಯವನ್ನು ಬಲಪಡಿಸುವ ಅಗತ್ಯ ಹೆಚ್ಚಾಗಿದೆ. ಶಾಸಕರಿಂದಲೂ ಅನೇಕ ತುರ್ತು ಕಾಮಗಾರಿಗಳ ಬಗ್ಗೆ ಮನವಿಗಳು ಬಂದಿವೆ. ಪೂರಕ ಆಯವ್ಯಯದ ಮೂಲಕ ಹೆಚ್ಚುವರಿ ಅನುದಾನ ಒದಗಿಸಿದರೆ ಅಗತ್ಯ ಕಾಮಗಾರಿಗಳನ್ನು ಆದ್ಯತೆಯಿಂದ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತದೆ,” ಎಂದು ಡಾ. ಅಜಯ್ ಧರ್ಮಸಿಂಗ್ ತಿಳಿಸಿದರು.

ಇದೇ ವೇಳೆ, SCP–TSP ಯೋಜನೆಯಡಿ ಸಣ್ಣ ನೀರಾವರಿ ಇಲಾಖೆಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆಯೂ ಸಚಿವರು ಮನವಿ ಮಾಡಿದರು. ಈ ಅನುದಾನದ ಮೂಲಕ ಅರ್ಹ ಫಲಾನುಭವಿಗಳಿಗೆ ಕೊಳವೆಬಾವಿಗಳನ್ನು ಕೊರೆಸಿಕೊಟ್ಟು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಹಾಗೂ ಅತಿಸಣ್ಣ ಹಿಡುವಳಿದಾರ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಾವರಿ ಸೌಲಭ್ಯ ಒದಗಿಸಲು ಹೆಚ್ಚಿನ ಅವಕಾಶ ಕಲ್ಪಿಸಬಹುದು ಎಂದು ಅವರು ವಿವರಿಸಿದರು.

“ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ನೀರಾವರಿ ಸೌಲಭ್ಯ ಸಿಗುವುದು ಅವರ ಕೃಷಿ ಉತ್ಪಾದನೆ ಮತ್ತು ಆದಾಯ ಭದ್ರತೆಗೆ ಅತ್ಯಂತ ಮುಖ್ಯ. SCP–TSP ಅಡಿಯಲ್ಲಿ ಹೆಚ್ಚುವರಿ ಅನುದಾನ ದೊರೆತರೆ ಹೆಚ್ಚಿನ ಅರ್ಹ ರೈತರಿಗೆ ಕೊಳವೆಬಾವಿ ಸೌಲಭ್ಯ ಕಲ್ಪಿಸಿ, ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆಗಳಿಗೆ ಬೆಂಬಲ ನೀಡಲು ಸಾಧ್ಯವಾಗುತ್ತದೆ,” ಎಂದು ಸಚಿವರು ಹೇಳಿದರು.

ಬರ ನಿರ್ವಹಣೆಯನ್ನು ಕೇವಲ ತಾತ್ಕಾಲಿಕ ಪರಿಹಾರಕ್ಕೆ ಸೀಮಿತಗೊಳಿಸದೆ, ಕೆರೆಗಳು, ಚೆಕ್‌ಡ್ಯಾಂಗಳು, ಬಾಂದಾರಗಳು, ಅಂತರ್ಜಲ ಮರುಪೂರಣ ಹಾಗೂ ಇತರೆ ಸಣ್ಣ ನೀರಾವರಿ ಮೂಲಸೌಕರ್ಯವನ್ನು ಬಲಪಡಿಸುವ ಮೂಲಕ ದೀರ್ಘಕಾಲಿಕ ಜಲ ಭದ್ರತೆ ನಿರ್ಮಿಸುವ ಅಗತ್ಯವಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

“ಪ್ರಸ್ತುತ ಪರಿಸ್ಥಿತಿಯನ್ನು ತುರ್ತು ಅಗತ್ಯವೆಂದು ಪರಿಗಣಿಸಿ, ಸಣ್ಣ ನೀರಾವರಿ ಇಲಾಖೆಗೆ ಪೂರಕ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ಹಾಗೂ SCP–TSP ಅಡಿಯಲ್ಲಿ ಅಗತ್ಯ ಅನುದಾನ ಒದಗಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡುವಂತೆ ಆರ್ಥಿಕ ಸಲಹೆಗಾರರನ್ನು ಕೋರಿದ್ದೇನೆ,” ಎಂದು ಡಾ. ಅಜಯ್ ಧರ್ಮಸಿಂಗ್ ಹೇಳಿದರು.

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ರಾಜೇಶ್ ಅಮ್ಮಿನಭಾವಿ ಹಾಗೂ ಇಲಾಖೆಯ ಎರಡು ವಲಯಗಳ ಮುಖ್ಯ ಅಭಿಯಂತರರು ಉಪಸ್ಥಿತರಿದ್ದರು.

Comments

Leave a Comment

Prev Post ಸಿಎಂ ಡಿ ಕೆ ಶಿವಕುಮಾರ್ ಮಧ್ಯಸ್ಥಿಕೆಯಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಂಧಾನ ಮಧ್ಯರಾತ್ರಿಯಲ್ಲಿ ಯಶಸ್ವಿ
Next Post ಅಮೆಜಾನ್ ಸರಕು ಸಾಗಣೆಗೆ ಅಮೆಜಾನ್ 3000 ಎಲೆಕ್ಟ್ರಿಕ್ ಟ್ರಕ್ ನಿಯೋಜನೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News