29.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
29.10.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಚಂಡಮಾರುತದ ಪ್ರಭಾವದಿಂದ ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಚಂಡಮಾರುತವು ಉತ್ತರಕ್ಕೆ ಚಲಿಸುತ್ತಿದ್ದಂತೆಯೇ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಗೆ ತಡೆಯಾಗುತ್ತಿರುವುದರಿಂದ ರಾಜ್ಯದಲ್ಲಿ ಛಳಿಯ ಪ್ರಮಾಣ ಕಡಿಮೆಯಾಗಲಿದೆ.
ಕರಾವಳಿ ಜಿಲ್ಲೆಗಳಗೆ ಅರಬ್ಬಿ ಸಮುದ್ರದ ಕಡೆಯಿಂದ ಗಾಳಿ ಬೀಸುತ್ತಿರುವುದರಿಂದ ಛಳಿ ಕಡಿಮೆಯಾಗಿ ಸ್ವಲ್ಪ ಸೆಖೆಯ ವಾತಾವರಣ ಇರಬಹುದು.
ಅಕ್ಟೋಬರ್ 28ರಂದು ಮ್ಯಾನ್ಮಾರ್ ದಕ್ಷಿಣ ತುದಿಯ ಕರಾವಳಿಯಲ್ಲಿ ತಿರಿಗುವಿಕೆ ಆರಂಭವಾಗುವ ಲಕ್ಷಣಗಳಿದ್ದು, ನವೆಂಬರ್ 1ರ ಸುಮಾರಿಗೆ ಚಂಡಮಾರುತವಾಗಿ ಪರಿವರ್ತನೆಗೊಂಡು ಆಂದ್ರಾ ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದೆ.
ಈ ಎರಡು ಸರಣಿ ಚಂಡಮಾರುತದ ಪ್ರಭಾವದಿಂದ ಹಿಂಗಾರು ಮಳೆ ಇನ್ನಷ್ಟು ವಿಳಂಬಗೊಳ್ಳುವ ಸಾಧ್ಯತೆಗಳಿವೆ.
ಆದರೂ ಈಗಿನಂತೆ ನವೆಂಬರ್ 2ರಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಳೆ ಆರಂಭವಾಗುವ ಸಾಧ್ಯತೆಗಳಿವೆ.







Comments
Leave a Comment