PRABHAVAA.COM

ಪರಿಷತ್ ಚುನಾವಣೆ ಫಲಿತಾಂಶ; ಜನರ ಸಂದೇಶವನ್ನು ಕೂಲಂಕುಷವಾಗಿ ಅಧ್ಯಯನ: ಸಿಎಂ ಡಿ ಕೆ ಶಿವಕುಮಾರ್

Bengaluru Urban:

Font size:

ಮತದಾರರು ಕೊಟ್ಟಿರುವ ತೀರ್ಮಾನ ಗೌರವಿಸುತ್ತೇವೆ

ಪರಿಷತ್ ಚುನಾವಣೆ ಫಲಿತಾಂಶ; ಜನರ ಸಂದೇಶವನ್ನು ಕೂಲಂಕುಷವಾಗಿ ಅಧ್ಯಯನ: ಸಿಎಂ ಡಿ ಕೆ ಶಿವಕುಮಾರ್

ಮತದಾರರು ಕೊಟ್ಟಿರುವ ತೀರ್ಮಾನ ಗೌರವಿಸುತ್ತೇವೆ

ಕಾರ್ಯಕರ್ತರನ್ನು ಹೇಗೆ ತಯಾರು ಮಾಡಬೇಕೆಂದು ತಿಳಿದಿದೆ

ಬೆಂಗಳೂರಿನಲ್ಲಿಯೇ ಸರ್ವ ಪಕ್ಷ ನಿಯೋಗ ಭೇಟಿಗೆ ಪ್ರಧಾನಿಗಳ ಸಮಯಕ್ಕೆ ಕೋರಿಕೆ

ಬೆಂಗಳೂರು, ಅ. 28:

"ಪರಿಷತ್ ಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ಸಂದೇಶವನ್ನು ಕೂಲಂಕುಷವಾಗಿ ಅಧ್ಯಯನ ಮಾಡಿ ಸರಿಪಡಿಸಿಕೊಳ್ಳುತ್ತೇವೆ" ಎಂದು ಸಿಎಂ
ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ನಿರೀಕ್ಷಿಸಿರಲಿಲ್ಲ

"ವಿಧಾನ ಪರಿಷತ್ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ತೀರ್ಮಾನವನ್ನು ಗೌರವದಿಂದ ಸ್ವೀಕಾರ ಮಾಡುತ್ತೇವೆ. ನಮ್ಮ ಪಕ್ಷಕ್ಕೆ ಎರಡು ಸ್ಥಾನಗಳು ಬರುವ ನಿರೀಕ್ಷೆಯಿತ್ತು. ಅದಾಗಿಲ್ಲ. ನಮ್ಮ ಪಕ್ಷ ಸೋತಿದ್ದರೂ ಮತಗಳು ಚೆನ್ನಾಗಿಯೇ ಬಂದಿವೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ನಿರೀಕ್ಷಿಸಿರಲಿಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ" ಎಂದರು.

ನಾವು ಕಲಿಯಬೇಕಾದ ವಿಚಾರಗಳಿವೆ

"ಬಿಜೆಪಿ ಮತ್ತು ಜೆಡಿಎಸ್ ನವರು. ಇದು ಭವಿಷ್ಯದ ಮುನ್ಸೂಚನೆ ಎನ್ನುತ್ತಿದ್ದಾರೆ. ಆದರೆ ಚನ್ನಪಟ್ಟಣ ಮತ್ತು ಶಿಗ್ಗಾಂವಿ ಬಗ್ಗೆ ಏನು ಉತ್ತರ ಕೊಡುತ್ತಾರೆ? ಅದು ಕೂಡ ಮುನ್ಸೂಚನೆಯೇ ಅಲ್ಲವೇ ? ಎಂದು ಪ್ರಶ್ನಿಸಿದರು. ನಾವು ಕಲಿಯಬೇಕಾದ ವಿಚಾರಗಳಿವೆ. ಈ ಬಗ್ಗೆ ಪರಿಶೀಲಿಸಿ, ನಮ್ಮ ಕಾರ್ಯಕರ್ತರನ್ನು ಹೇಗೆ ತಯಾರು ಮಾಡಬೇಕೆಂದೂ ತಿಳಿದಿದೆ" ಎಂದರು.

ಮತಪತ್ರ ಚುನಾವಣೆ: ನೂತನ ಕ್ರಿಯಾ ಯೋಜನೆ

ನಾಲ್ಕು ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯನ್ನು ಸಂಪೂರ್ಣವಾಗಿ ಮತಪತ್ರ ಮೂಲಕವೇ ನಡೆಸಲಾಗಿದ್ದರೂ ಕಾಂಗ್ರೆಸ್ ಸೋತಿರುವುದು ಪಕ್ಷಕ್ಕೆ ಹಿನ್ನಡೆಯಾಗಿದೆ ಎಂಬ ಬಿಜೆಪಿ, ಜೆಡಿಎಸ್ ಹೇಳಿಕೆ ಬಗ್ಗೆ ಕೇಳಿದಾಗ, "ಹೌದು, ಮತಪತ್ರದ ಮೂಲಕ ಚುನಾವಣೆಯ ಅಗತ್ಯವಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಹಲವಾರು ಸಮಸ್ಯೆಗಳಿವೆ. ನವೆಂಬರ್ ನಂತರ ನಮ್ಮ ಪಕ್ಷ ಈ ಕುರಿತು ಹೊಸ ಕ್ರಿಯಾ ಯೋಜನೆಯನ್ನು ಹೊರತರಲಿದೆ" ಎಂದರು.

ಸಮಸ್ಯೆಗಳ ಕುರಿತು ಚರ್ಚಿಸಲು ಸಮುದಾಯವಾರು ಶಾಸಕರ ಸಭೆ

ಸಮುದಾಯವಾರು ಶಾಸಕರ ಸಭೆ ಕರೆದಿರುವ ಬಗ್ಗೆ ಕೇಳಿದಾಗ, "ಸಮುದಾಯಗಳ ಸಮಸ್ಯೆಗಳು ಹಾಗೂ ನ್ಯಾಯಾಲಯದ ತೀರ್ಪಿನ ಬಗ್ಗೆ ಚರ್ಚಿಸಬೇಕಿದ್ದು, ಅದಕ್ಕಾಗಿ ಸಭೆ ಕರೆಯಲಾಗಿದೆ" ಎಂದರು.

ಬರ ಪರಿಹಾರ: ಖಾತೆಗಳ ಪರಿಶೀಲನೆ

ಬರ ಪರಿಹಾರ ಹಣ ಬಿಡುಗಡೆಯ ಬಗ್ಗೆ ಕೇಳಿದಾಗ, "ಖಾತೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಸರ್ಕಾರಿ ಆದೇಶ ಹೊರಡಿಸಿ ಹಣ ಬಿಡುಗಡೆ ಮಾಡಲಾಗಿದೆ. ಎಲ್ಲವನ್ನು ಸರಿಪಡಿಸಿ ಖಾತೆಗಳಿಗೆ ಪರಿಹಾರದ ಮೊತ್ತ ಜಮೆ ಮಾಡಲಾಗುವುದು" ಎಂದರು.

ಬೆಂಗಳೂರಿನಲ್ಲಿಯೇ ಸರ್ವ ಪಕ್ಷ ನಿಯೋಗ ಭೇಟಿಗೆ ಪ್ರಧಾನಿಗಳ ಸಮಯಕ್ಕೆ ಕೋರಿಕೆ

"ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಸಮಯ ನಿಗದಿ ಮಾಡಲು ಕೋರಲಾಗಿದೆ. ಪ್ರಧಾನ ಮಂತ್ರಿಗಳು ಮೆಟ್ರೋ ಉದ್ಘಾಟನೆಗಾಗಿ ನವೆಂಬರ್ 15 ರಂದು ಬೆಂಗಳೂರಿಗೆ ಆಗಮಿಸಿದಾಗ, ಸಮಯ ನಿಗದಿ ಮಾಡಲು ಕೋರುತ್ತೇನೆ. ಅವರು ಮೈಸೂರಿಗೆ ಬರುವ ಕಾರ್ಯಕ್ರಮವೂ ಇತ್ತು. ಆದರೆ ದಸರಾ ಪ್ರಯುಕ್ತ ಅದನ್ನು ಮುಂದೂಡಲಾಗಿದೆ. ಅಲ್ಲಿ ಕೇಳಲು ಸಾಧ್ಯವಾಗದಿದ್ದರೆ ಬೆಂಗಳೂರಿಗೆ ಭೇಟಿ ನೀಡಿದಾಗ ಇಲ್ಲಿಯೇ ಸರ್ವ ಪಕ್ಷ ನಿಯೋಗ ಭೇಟಿ ಮಾಡಲು ಸಮಯ ನಿಗದಿ ಮಾಡುವಂತೆ ಕೇಳುತ್ತೇನೆ ಎಂದರು.

ಮತದಾರರ ಅಂತಿಮ ಪಟ್ಟಿ ಬಗ್ಗೆ ಆಕ್ಷೇಪಗಳಿವೆ

ಚುನಾವಣಾ ಆಯೋಗದ ಅಂತಿಮ ಪಟ್ಟಿ ಹೊರಡಿಸಿದ್ದು ಸರ್ಕಾರದಿಂದ ಆಕ್ಷೇಪಣೆಗಳಿವೆಯೇ ಎಂದು ಕೇಳಿದಾಗ "ಖಂಡಿತ ಆಕ್ಷೇಪಣೆಗಳಿವೆ. ಅವುಗಳನ್ನು ಸಲ್ಲಿಸಲು ಅವಕಾಶ ನೀಡಿದ್ದಾರೆ. ಫಾರಂ 7 ವಿಚಾರದಲ್ಲಿ ನಾವು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಆಯೋಗ ಒಪ್ಪಿದೆ" ಎಂದರು.

ದೇವರು ಒಳ್ಳೇದು ಮಾಡಲಿ

ಈ ಬಾರಿ ದೀಪಾವಳಿಯಿಂದಲೇ ನರಕಾಸುರರ ಸಂಹಾರ ಆರಂಭ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ "ದೇವರು ಒಳ್ಳೆಯದು ಮಾಡಲಿ" ಎಂದು ಸಿಎಂ ಉತ್ತರಿಸಿದರು.

Comments

Leave a Comment

Prev Post ಅಗ್ರ ಈಜುಗಾರರ ಪೈಪೋಟಿಗೆ ವೇದಿಕೆ: ನೆಟ್ಟಕಲ್ಲಪ್ಪ ಈಜು ಚಾಂಪಿಯನ್‌ಷಿಪ್ ಅಕ್ಟೋಬರ್ 31ರಿಂದ
Next Post ಭೂ ಗ್ಯಾರಂಟಿ ಪೋರ್ಟಲ್ ಮೂಲಕ ಸೈನಿಕರಿಗೆ ನಿವೇಶನ ಹಂಚಿಕೆ: ಪಾರದರ್ಶಕ ಮತ್ತು ಡಿಜಿಟಲ್ ವ್ಯವಸ್ಥೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News