PRABHAVAA.COM

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭೂಪರಿವರ್ತನೆ ಸರಳ: ಅಧ್ಯಕ್ಷ ಸಂತೋಷ್ ಕುಮಾರ್

:

Font size:

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭೂಪರಿವರ್ತನೆ ಸರಳ: ಅಧ್ಯಕ್ಷ ಸಂತೋಷ್ ಕುಮಾರ್

From Jayaram Udupi
ಮಂಗಳೂರು:
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾದ ವ್ಯಾಪ್ತಿಯಲ್ಲಿ ಭೂಪರಿವರ್ತನೆ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದ್ದು, ಅನಧಿಕೃತ ವಿನ್ಯಾಸಗಳ ಸಕ್ರಮೀಕರಣಕ್ಕೆ ಸಂಬಂಧಿಸಿದ ಶುಲ್ಕವನ್ನು ಶೇ.15ರಿಂದ ಶೇ.1ಕ್ಕೆ ಇಳಿಸಲಾಗಿದೆ ಎಂದು ಮೂಡಾ ಅಧ್ಯಕ್ಷ ಸಂತೋಷ್ ಕುಮಾರ್ ತಿಳಿಸಿದ್ದಾರೆ.

ಮೂಡಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಯೋಜನೆ ವ್ಯಾಪ್ತಿಯಲ್ಲಿ ನೇರ ವಿನ್ಯಾಸ ಹಾಗೂ ಏಕ ನಿವೇಶನ ಅನುಮೋದನೆಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ನಿವೇಶನ ಖರೀದಿ, ಬಡಾವಣೆ ಅಭಿವೃದ್ಧಿ ಮತ್ತು ಮನೆ ನಿರ್ಮಾಣದ ಸಂದರ್ಭದಲ್ಲಿ ಸಾರ್ವಜನಿಕರು ಎದುರಿಸುತ್ತಿದ್ದ ವಿಳಂಬ, ಅನಗತ್ಯ ಅಲೆದಾಟ ಹಾಗೂ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ ಎಂದರು.

ಮಂಗಳೂರಿನ ಕುಂಜತ್ತಬೈಲ್‌ನಲ್ಲಿ ಸುಮಾರು 17 ಎಕರೆ ಪ್ರದೇಶದಲ್ಲಿ 208 ನಿವೇಶನಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ಈ ಪೈಕಿ 38 ನಿವೇಶನಗಳು ಈಗಾಗಲೇ ಮಾರಾಟವಾಗಿದ್ದು, ಉಳಿದ ನಿವೇಶನಗಳಿಗೆ ನಿಗದಿತ ಶೇ.10ರಷ್ಟು ಮೊತ್ತ ಪಾವತಿಸಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಚೇಳಾರು ಗ್ರಾಮದಲ್ಲಿ ಸುಮಾರು 45 ಎಕರೆ ಪ್ರದೇಶದಲ್ಲಿ ಹಾಗೂ ಸಂಜಯನಗರದಲ್ಲಿ ವಸತಿ ಬಡಾವಣೆ ಅಭಿವೃದ್ಧಿಪಡಿಸುವ ಯೋಜನೆಗಳೂ ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ನಗರದ ಒಂಬತ್ತು ಕೆರೆಗಳನ್ನು ಸುಮಾರು ₹18 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಉಳ್ಳಾಲದಲ್ಲಿಯೂ ಕೆರೆಗಳ ಅಭಿವೃದ್ಧಿಗೆ ಅನುದಾನ ಮೀಸಲಿಡುವ ಉದ್ದೇಶವಿದೆ. ಮಂಗಳೂರಿನಲ್ಲಿ ಉದ್ಯಾನವನಗಳ ಕೊರತೆ ನೀಗಿಸಲು ಮಹಾನಗರ ಪಾಲಿಕೆ ಹಾಗೂ ಮೂಡಾ ಅಧಿಕಾರಿಗಳ ಸಹಯೋಗದಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಲಾಗುತ್ತಿದೆ ಎಂದರು.

ಕೊಟ್ಟಾರ ಚೌಕಿಯಿಂದ ಉರ್ವಸ್ಟೋರ್ ಮೂಲಕ ಲೇಡಿಹಿಲ್‌ವರೆಗೆ ಸುಮಾರು ₹5 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ರಸ್ತೆ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಪಾದಚಾರಿ ಮಾರ್ಗ, ರಸ್ತೆ ಸೌಂದರ್ಯೀಕರಣ ಹಾಗೂ ಸಸ್ಯಗಳ ನೆಡುವಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ.

ಉರ್ವಸ್ಟೋರ್ ಮಾರುಕಟ್ಟೆಯನ್ನು ಆಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಸುಮಾರು 22 ಸಾವಿರ ಚದರ ಅಡಿ ವಿಸ್ತೀರ್ಣದ ಮಾರುಕಟ್ಟೆ ಕಟ್ಟಡದಲ್ಲಿ ನೆಲಮಾಳಿಗೆಯ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗುವುದು. ಯೋಜನೆಗೆ ₹8ರಿಂದ ₹9 ಕೋಟಿ ವೆಚ್ಚವಾಗುವ ಅಂದಾಜಿದೆ. ತರಕಾರಿ, ಮೀನು ಮತ್ತು ಮಾಂಸದ ಮಳಿಗೆಗಳನ್ನು ಪ್ರತ್ಯೇಕವಾಗಿ ವ್ಯವಸ್ಥೆಗೊಳಿಸಿ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು. ಮಾರುಕಟ್ಟೆಯ ಪಕ್ಕದಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸುವ ಮೂಲಕ ಆದಾಯ ಗಳಿಸುವ ಉದ್ದೇಶವಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮೂಡಾ ಆಯುಕ್ತ ಮೊಹಮ್ಮದ್ ನಝೀರ್, ಸದಸ್ಯರಾದ ಸುಮನ್ ದಾಸ್, ಸವಿತಾ ಮಿಸ್ಕಿತ್, ನೀರಜ್ ಪಾಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Comments

Leave a Comment

Prev Post ಮುಂಗಾರು ವೈಫಲ್ಯದಿಂದ ತತ್ತರಿಸಿದ ರೈತರಿಗೆ ನೆರವಿನ ಹಸ್ತ: ಸರ್ಕಾರದಿಂದ ಇನ್‌ಪುಟ್ ಸಬ್ಸಿಡಿ ಬಿಡುಗಡೆ ಆದೇಶ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News