PRABHAVAA.COM

ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ: ಆನ್‌ಲೈನ್ ಅರ್ಜಿ ಆಹ್ವಾನ

Bengaluru Urban:

Font size:

ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ: ಆನ್‌ಲೈನ್ ಅರ್ಜಿ ಆಹ್ವಾನ

ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ: ಆನ್‌ಲೈನ್ ಅರ್ಜಿ ಆಹ್ವಾನ

#KEA #KarnatakaExaminationsAuthority #KarnatakaJobs #GroupCRecruitment #GovernmentJobs #KarnatakaGovernment #CompetitiveExam #OnlineApplication #DegreeJobs #PUCJobs #JobAlert #Recruitment2026 #CareerOpportunities #KarnatakaRecruitment #SarkariNaukri #ExamNotification #EmploymentNews #GovtVacancies #KEARecruitment #JobsInKarnataka

link ; https://prabhavaa.com/media/documents/exam1.pdf

https://prabhavaa.com/media/documents/exam2.pdf

ಬೆಂಗಳೂರು, ಅ.29: ಕರ್ನಾಟಕ ರಾಜ್ಯದ ವಿವಿಧ ಇಲಾಖೆ, ಸಂಸ್ಥೆ, ನಿಗಮ ಹಾಗೂ ಮಂಡಳಿಗಳಲ್ಲಿನ ಉಳಿದ ಮೂಲ ವೃಂದದ ಖಾಲಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಪ್ರಕಟಿಸಿದೆ. ಗ್ರೂಪ್-ಸಿ ವೃಂದದ ಪದವಿ ಮಟ್ಟ ಹಾಗೂ ದ್ವಿತೀಯ ಪಿಯುಸಿ/ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಒಂದೇ ಪಠ್ಯಕ್ರಮದ ನೇರ ನೇಮಕಾತಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೆಇಎ ಪ್ರಕಟಿಸಿರುವ ಅಧಿಸೂಚನೆಯ ಪ್ರಕಾರ, ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು-2021 ಹಾಗೂ ನಂತರದ ತಿದ್ದುಪಡಿ ನಿಯಮಗಳ ಅನ್ವಯ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿನ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು.

ಪದವಿ ಮಟ್ಟದ ವಿದ್ಯಾರ್ಹತೆ ಹೊಂದಿರುವ ಹುದ್ದೆಗಳ ಜೊತೆಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವ ಹುದ್ದೆಗಳಿಗೂ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಗೆ ಅರ್ಹತೆ ಪಡೆಯಲು ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಾಜರಾಗಿ ಅರ್ಹತೆ ಗಳಿಸಬೇಕು.

ಅರ್ಜಿಗಳ ಸಲ್ಲಿಕೆ, ಪರೀಕ್ಷಾ ದಿನಾಂಕ, ಹುದ್ದೆಗಳ ಸಂಖ್ಯೆ, ಮೀಸಲಾತಿ ವಿವರ ಹಾಗೂ ಇತರ ಷರತ್ತುಗಳ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಿ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸುವಂತೆ ಪ್ರಾಧಿಕಾರ ತಿಳಿಸಿದೆ.

Comments

Leave a Comment

Prev Post ಪ್ರಿಯಾಂಕ್ ಖರ್ಗೆಗೆ ನಿಂದಕ ಮಂತ್ರಿ ಎಂದು ಕರೆದ ಹೆಚ್ ಡಿ ಕುಮಾರಸ್ವಾಮಿ!
Next Post ರಾಜ್ಯ ಸರ್ಕಾರದಿಂದ ಐಎಎಸ್ ಅಧಿಕಾರಿಗಳ ವರ್ಗಾವಣೆ; ಹಲವು ಪ್ರಮುಖ ಹುದ್ದೆಗಳಿಗೆ ಹೊಸ ನೇಮಕ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News