PRABHAVAA.COM

ರಾಜ್ಯ ಸರ್ಕಾರದಿಂದ ಐಎಎಸ್ ಅಧಿಕಾರಿಗಳ ವರ್ಗಾವಣೆ; ಹಲವು ಪ್ರಮುಖ ಹುದ್ದೆಗಳಿಗೆ ಹೊಸ ನೇಮಕ

Bengaluru Urban:

Font size:

ರಾಜ್ಯ ಸರ್ಕಾರದಿಂದ ಐಎಎಸ್ ಅಧಿಕಾರಿಗಳ ವರ್ಗಾವಣೆ; ಹಲವು ಪ್ರಮುಖ ಹುದ್ದೆಗಳಿಗೆ ಹೊಸ ನೇಮಕ

ರಾಜ್ಯ ಸರ್ಕಾರದಿಂದ ಐಎಎಸ್ ಅಧಿಕಾರಿಗಳ ವರ್ಗಾವಣೆ; ಹಲವು ಪ್ರಮುಖ ಹುದ್ದೆಗಳಿಗೆ ಹೊಸ ನೇಮಕ

#IASTransfers #KarnatakaGovernment #KarnatakaIAS #BureaucraticReshuffle #DPAR #AdministrativeReforms #GovernmentNotification #VidhanaSoudha #SchoolEducationDepartment #BackwardClassesDepartment #PanchayatRaj #BengaluruWestCityCorporation #KarnatakaHousingBoard #Kalaburagi #PublicAdministration #CivilServices #KarnatakaNews #BreakingNews #Governance #PolicyUpdate

ಬೆಂಗಳೂರು, ಅ.30-ರಾಜ್ಯ ಸರ್ಕಾರವು ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಪ್ರಕಟಿಸಿರುವ ಅಧಿಸೂಚನೆಯ ಪ್ರಕಾರ, ಹಲವು ಪ್ರಮುಖ ಇಲಾಖೆಗಳ ಆಯುಕ್ತರ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ.

ಅಧಿಸೂಚನೆಯಂತೆ, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತರಾಗಿ ನೇಮಿಸಲಾಗಿದೆ.

ಇನ್ನೊಂದೆಡೆ, ಈ ಹಿಂದೆ ಹೊರಡಿಸಿದ್ದ ಆದೇಶದಲ್ಲಿ ಭಾಗಶಃ ತಿದ್ದುಪಡಿ ಮಾಡಿ, ದಯಾನಂದ ಕೆ.ಎ. ಅವರು ಕರ್ನಾಟಕ ಗೃಹ ಮಂಡಳಿಯ ಆಯುಕ್ತರಾಗಿ ಮುಂದುವರೆಯಲಿದ್ದಾರೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಹುದ್ದೆಗಾಗಿ ಕಾಯುತ್ತಿದ ವೆಂಕಟ್ ರಾಜಾ ಅವರನ್ನು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾಗಿ ನೇಮಕ ಮಾಡಲಾಗಿದ್ದು, ಈ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಪಾಟೀಲ್ ಯಾಳಗೌಡ ಶಿವನಗೌಡ ಅವರನ್ನು ಆ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ವಿಶೇಷ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಸಿ.ಟಿ. ಅವರನ್ನು ವರ್ಗಾವಣೆ ಮಾಡಿ, ಬೆಂಗಳೂರು ಪಶ್ಚಿಮ ನಗರ ನಿಗಮದ ಆಯುಕ್ತರಾಗಿ ನೇಮಿಸಲಾಗಿದೆ. ಕೇಂದ್ರ ಸರ್ಕಾರದ ನಿಯೋಜನೆಗೆ ತೆರಳುತ್ತಿರುವ ಡಾ. ರಾಜೇಂದ್ರ ಕೆ.ವಿ. ಅವರ ಸ್ಥಾನಕ್ಕೆ ಈ ನೇಮಕಾತಿ ಮಾಡಲಾಗಿದೆ.

ಕಲಬುರಗಿ ನಗರ ಪಾಲಿಕೆಯ ಆಯುಕ್ತರಾಗಿದ್ದ ಶಿಂಧೆ ಅವಿನಾಶ್ ಸಂಜೀವನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಜೊತೆಗೆ, ಅವರನ್ನು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿಗೂ ನಿಯೋಜಿಸಲಾಗಿದೆ. ಈ ಹುದ್ದೆಯ ಹೆಚ್ಚುವರಿ ಹೊಣೆ ಹೊತ್ತಿದ್ದ ರಾಹುಲ್ ಶರಣಪ್ಪ ಸಂಕನೂರು ಅವರನ್ನು ಆ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ.

Comments

Leave a Comment

Prev Post ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ: ಆನ್‌ಲೈನ್ ಅರ್ಜಿ ಆಹ್ವಾನ
Next Post 38 ರಾಷ್ಟ್ರಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದಿಂದ ಲಾಭ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News