PRABHAVAA.COM

ಬಾಂಬ್-ಬುಲೆಟ್‌ಗಳ ಸದ್ದಡಗಿಸಿ ಬುಲೆಟ್ ರೈಲುಗಳ ಯುಗಕ್ಕೆ ಹಾಡಿದೆ ಮೋದಿ ಸರ್ಕಾರ

Bengaluru Urban:

Font size:

* ಕರ್ನಾಟಕಕ್ಕೆ ಹೈಸ್ಪೀಡ್ ರೈಲು ಕಾರಿಡಾರ್

ಬಾಂಬ್-ಬುಲೆಟ್‌ಗಳ ಸದ್ದಡಗಿಸಿ ಬುಲೆಟ್ ರೈಲುಗಳ ಯುಗಕ್ಕೆ ಹಾಡಿದೆ ಮೋದಿ ಸರ್ಕಾರ
* ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದನೆ
* ಕರ್ನಾಟಕದಲ್ಲಿ ರೈಲ್ವೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ; ವಂದೇ ಭಾರತ್ ರೈಲುಗಳ ಸುಗಮ-ಸುರಕ್ಷಿತ ಸಂಚಾರಕ್ಕೆ ಆದ್ಯತೆ
* ಕರ್ನಾಟಕಕ್ಕೆ ಹೈಸ್ಪೀಡ್ ರೈಲು ಕಾರಿಡಾರ್

ಬೆಂಗಳೂರು: 'ದೇಶದಲ್ಲಿ ರೈಲ್ವೆ ಕ್ರಾಂತಿಯಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಾಂಬ್, ಗುಂಡುಗಳ ಸದ್ದಡಗಿಸಿ ಬುಲೆಟ್ ರೈಲುಗಳ ಯುಗಕ್ಕೆ ನಾಂದಿ ಹಾಡಿದೆ" ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದಿಸಿದರು.

ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಲ್ಲಿ ಭಾನುವಾರ, ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ಹೊಸ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದ ವೇಳೆ ಮಾತನಾಡಿದರು.

ರೈಲು ಪ್ರಯಾಣದ ಸುರಕ್ಷತೆಗಾಗಿ 'ಕವಚ್' ಸ್ವಯಂ ಚಾಲಿತ ರೈಲು ರಕ್ಷಣಾ ತಂತ್ರಜ್ಞಾನ ಅಳವಡಿಸಲಾಗುತ್ತಿದೆ. ರೈಲು ಅಪಘಾತ ತಡೆಯುವ ನಿಟ್ಟಿನಲ್ಲಿ ಈ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.

ದೇಶಾದ್ಯಂತ ವಂದೇ ಭಾರತ್ ರೈಲುಗಳ ಸೇವೆ ವಿಸ್ತರಣೆಯಾಗಿದ್ದು, ಈಗಾಗಲೇ 150ಕ್ಕೂ ಹೆಚ್ಚು ರೈಲುಗಳು ಸಂಚರಿಸುತ್ತಿವೆ. ರೈಲ್ವೆ ಸಾರಿಗೆಯಲ್ಲಿ ವೇಗ, ಸುರಕ್ಷತೆ ಮತ್ತು ಆಧುನಿಕ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ಭಾರತದ ಎರಡು ಪ್ರಮುಖ ಆರ್ಥಿಕ ಕೇಂದ್ರಗಳಾದ ಬೆಂಗಳೂರು ಮತ್ತು ಮುಂಬೈ ನಗರಗಳ ಸಂಪರ್ಕಕ್ಕೆ 'ವಂದೇ ಭಾರತ್ ಸ್ಲೀಪರ್ ರೈಲು' ಮಹತ್ವದ ಸೇರ್ಪಡೆಯಾಗಲಿದೆ. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸುಮಾರು 1,118 ಕಿ.ಮೀ. ದೂರವನ್ನು ಕೇವಲ 16 ಗಂಟೆಗಳಲ್ಲಿ ಕ್ರಮಿಸಲಿದೆ. ಸುಮಾರು ಅರ್ಧದಷ್ಟು ಸಮಯ ಉಳಿಯುತ್ತದೆ ಎಂದು ಹೇಳಿದರು.

ಕರ್ನಾಟಕಕ್ಕೆ ಹೈಸ್ಪೀಡ್ ಕಾರಿಡಾರ್:
ರಾಜ್ಯದಲ್ಲಿ ಹೈಸ್ಪೀಡ್ ರೈಲು ಕಾರಿಡಾರ್‌ಗಳ ಅಭಿವೃದ್ಧಿಗೂ ಕೇಂದ್ರ ಸರ್ಕಾರ ಯೋಜನೆ ರೂಪಿಸಿದ್ದು, ತುಮಕೂರು, ಹಾವೇರಿ, ರಾಣೆಬೆನ್ನೂರು, ಬೆಳಗಾವಿ ಸೇರಿದಂತೆ ಹಲವು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಸ್ತಾವನೆಗಳಿವೆ ಎಂದು ತಿಳಿಸಿದರು.

ರಾಜ್ಯದ ರೈಲ್ವೆ ವಲಯಕ್ಕೆ ಹೆಚ್ಚಿನ ಆದ್ಯತೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ರೈಲ್ವೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ. 2008ರಲ್ಲಿ ರಾಜ್ಯಕ್ಕೆ ಸುಮಾರು ₹ 700 ಕೋಟಿ ರೈಲ್ವೆ ಅನುದಾನ ನೀಡಲಾಗುತ್ತಿತ್ತು. ಆದರೆ ಈಗ ವಾರ್ಷಿಕವಾಗಿ ₹7,000ರಿಂದ ₹8,000 ಕೋಟಿ ವರೆಗೆ ಅನುದಾನ ನೀಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯಕ್ಕೆ 7748 ಕೋಟಿ ಹಂಚಿಕೆ:
ಕೇಂದ್ರ ಸರ್ಕಾರ 2026-27ರಲ್ಲಿ ರಾಜ್ಯಕ್ಕೆ ₹7,748 ಕೋಟಿ ಹಂಚಿಕೆ ಮಾಡಿದೆ. ರಾಜ್ಯದ ರೈಲ್ವೆ ಸಂಪರ್ಕ ಅಭಿವೃದ್ಧಿಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ಇದಕ್ಕಾಗಿ ಪ್ರಧಾನಿ ಮೋದಿ ಅವರಿಗೆ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಅರ್ಪಿಸುತ್ತೇನೆ ಎಂದರು.

ಇದೇ ವೇಳೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಇವರು ತಾಂತ್ರಿಕ ಹಿನ್ನೆಲೆ ಮತ್ತು ಆಡಳಿತಾತ್ಮಕ ಅನುಭವ ಹೊಂದಿದ್ದು, ರೈಲ್ವೆ ಕ್ಷೇತ್ರದಲ್ಲಿ ಅನನ್ಯ ಅನನ್ಯ ಸುಧಾರಣೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಹೇಳಿದರು.

170 gw ಮೀರಿದ ಸೌರ ಶಕ್ತಿ: ದೇಶದ ಸೌರಶಕ್ತಿ ಉತ್ಪಾದನೆ ಬಗ್ಗೆ ವಿವರಿಸುತ್ತಾ, ಭಾರತ ಸೌರಶಕ್ತಿ ಉತ್ಪಾದನೆಯಲ್ಲಿ ಸಹ ಅದ್ಭುತ ಪ್ರಗತಿ ಹೊಂದಿದೆ. ಹಿಂದೆ ಕೇವಲ 2.6 gw ಇದ್ದ ಸೌರ ಸಾಮರ್ಥ್ಯವೀಗ ಸುಮಾರು 170gw ಮೀರಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಸಂಸದರಾದ ಪಿ.ಸಿ.ಮೋಹನ್, ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಲೆಹರ್ ಸಿಂಗ್ ಸಿರೋಯ, ಜಗ್ಗೇಶ್, ಮಾಜಿ ಸಂಸದ ಉಮೇಶ ಜಾಧವ್ ಸೇರಿದಂತೆ ಗಣ್ಯರು ಹಾಗೂ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು

Comments

Leave a Comment

Prev Post ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜದ ಸ್ಥಾನಮಾನ ನೀಡಲು ಚಿಂತನೆ: ಸಿಎಂ ಡಿ ಕೆ ಶಿವಕುಮಾರ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News