PRABHAVAA.COM

ಸ್ಟಿಂಗ್ ಪ್ರಕರಣದಲ್ಲಿ ತಮ್ಮ ಹೆಸರು ತಂದ ಪೊಲೀಸ್ ಆಯುಕ್ತರ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡ

Bengaluru Urban:

Font size:

ಪೊಲೀಸ್ ಕಮೀಷನರಾ? ಅವರು ಹೆಡ್ ಕ್ಲರ್ಕಾ ಎಂದು ಸಿಡಿಮಿಡಿ

ಈ‌ ಕುಮಾರಸ್ವಾಮಿಯನ್ನ ಈ‌ ಸರ್ಕಾರ, ಈ ಅಧಿಕಾರಿಗಳು ಟಚ್ ಮಾಡೋಕೆ ಆಗಲ್ಲ

ಬೆಂಗಳೂರು 1 ನವೆಂಬರ್ 2026

ಮಾಜಿ ಮುಖ್ಯಮಂತ್ರಿ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್ ತನಿಖೆಯ ಬಗ್ಗೆ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿರುವ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್ ಸರ್ಕಾರ ನನ್ನ ವಿರುದ್ಧ ಹಗೆ ಸಾಧಿಸುತ್ತಿದೆ ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿ ಭಾನುವಾರ ಸಂಜೆ ಜಾಲಹಳ್ಳಿಯ ಹೆಚ್ಎಂಟಿ ಆಟದ ಮೈದಾನದಲ್ಲಿ ನಡೆದ hmt ಕನ್ನಡಿಗ ನೂತನ ಸರಣಿಯ ಕೈಗಡಿಯಾರಗಳ ಲೋಕಾರ್ಪಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಕೇಂದ್ರ ಸಚಿವರು ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

ಸೋಮವಾರ ಇದರ ಬಗ್ಗೆ ಸಂಪೂರ್ಣ ಮಾಹಿತಿ ಕೊಡುತ್ತೇನೆ. ಸ್ಟಿಂಗ್ ಆಪರೇಷನ್ ತಿರುಗುಬಾಣ ಯಾರಿಗೆ ಆಗುತ್ತದೆ ಎಂದು ಹೇಳುತ್ತೇನೆ. ನಮ್ಮ ಬಗ್ಗೆ ಯಾರು ಕೂಡ ಗಾಬರಿ ಆಗಬೇಕಿಲ್ಲ. ಯಾರೀ ಅದು ಪೊಲೀಸ್ ಕಮೀಷನರ್? ಅವರು ಪೊಲೀಸ್ ಕಮೀಷನರಾ? ಹೆಡ್ ಕ್ಲರ್ಕ್ ಗಿಂತ ಕಡೆಯಾಗಿ ಸ್ಟೇಟ್ಮೆಂಟ್ ಕೊಟ್ಟಿದ್ದಾರೆ. ಯಾರ ಹಂಗಿನಲ್ಲಿ ಕೆಲಸ ಮಾಡ್ತಿದ್ದಾರೆ ಎಂದು ಸಚಿವರು ಕಿಡಿಕಾರಿದರು.

ಪೊಲೀಸ್ ಆಯುಕ್ತರು ತಮ್ಮ ಹುದ್ದೆ ಉಳಿಸಿಕೊಳ್ಳಲು ಏನೆಲ್ಲಾ ಮಾಡ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಇಲಾಖೆಯ ಒಳಗೆ ಏನು ನಡೆಯುತ್ತಿದೆ ಎಂಬುದನ್ನು ನಾನು ಹೇಳುತ್ತೇನೆ. ಈ ಪ್ರಕರಣ ಯಾರಿಗೆ ತಿರುಗುಬಾಣ ಯಾರಿಗೆ ಆಗುತ್ತದೆ ಎಂದು ಬಹಿರಂಗ ಮಾಡುತ್ತೇನೆ. ಸೋಮವಾರ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದು ಸಚಿವರು ಗುಡುಗಿದರು.

ಸ್ಟಿಂಗ್ ಆಪರೇಷನ್ ಬಗ್ಗೆ ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂಬುದು, ಯಾವ ಮಟ್ಟಕ್ಕೆ ಹೋಗುತ್ತಿದೆ ಎಂಬುದು ನನಗೆ ತಿಳಿದಿದೆ. ಈ ಸರ್ಕಾರದ ಆಡಳಿತ ಯಾವ ರೀತಿ ಇದೆ ನಡೆಯುತ್ತಿದೆ ಎಂಬುದನ್ನು ಹೇಳುತ್ತೇನೆ. ಈ‌ ಕುಮಾರಸ್ವಾಮಿಯನ್ನ ಈ‌ ಸರ್ಕಾರ, ಈ ಅಧಿಕಾರಿಗಳು ಟಚ್ ಮಾಡೋಕೆ ಆಗಲ್ಲ. ಕುಮಾರಸ್ವಾಮಿಯನ್ನ‌ ಅಷ್ಟು ಸುಲಭವಾಗಿ ಇವರು ಎದುರಿಸಲು ಆಗಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಈ ಸರ್ಕಾರ ಯಾರನ್ನೆಲ್ಲಾ ರಕ್ಷಣೆ ಮಾಡ್ತಿದೆ ಎಂಬುದನ್ನು ಬಲ್ಲೆ. ಸಿದ್ದರಾಮಯ್ಯ ಅವರು ಯಾಕೆ ಸ್ಟೇ ತಗೊಂಡಿದ್ದಾರೆ? ಯತೀಂದ್ರ ಸಿದ್ದರಾಮಯ್ಯ ನಮ್ಮ ಪಕ್ಷದವರೇ ಸ್ಟಿಂಗ್ ಮಾಡಿದ್ದಾರೆ ಎಂದು ಹೇಳಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟ್ರೈಲರ್ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು; ಇದೆಲ್ಲಾ ಯಾವ ಟ್ರೈಲರ್? ನಾನು ಸಿನಿಮಾ ಮಾಡಿರೋನು. ಇವರು ಈಗ ಸಿನಿಮಾ ಮಾಡೋಕೆ ಶುರು ಮಾಡಿದ್ದಾರೆ. ಇವರ ಸಿನಿಮಾ ಬಗ್ಗೆ ನಾಳೆ ನಾನು ವಿವರವಾಗಿ ಹೇಳುತ್ತೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Comments

Leave a Comment

Prev Post ಭಾರತದ ಹೆಬ್ಬಾಗಿಲಾದ ಬೆಂಗಳೂರು, ಕನ್ನಡದ ಬಲವೇ ಕರ್ನಾಟಕದ ಭವಿಷ್ಯ: ಡಿ.ಕೆ. ಶಿವಕುಮಾರ್
Next Post ದಾಖಲೆಯಿಲ್ಲದ ಗ್ರಾಮಠಾಣಾ ಆಸ್ತಿಗೆ ಇ-ಸ್ವತ್ತು, ನ.2ರಿಂದ ಅರ್ಜಿ ಸ್ವೀಕಾರ: ಈಶ್ವರ ಖಂಡ್ರೆ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News