PRABHAVAA.COM

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಹಿರಿಯೂರಿನ ₹244 ಕೋಟಿ ಕೆರೆ ತುಂಬಿಸುವ ಯೋಜನೆಗೆ ನಾಳೆ ಭೂಮಿಪೂಜೆ: ಡಾ. ಅಜಯ್ ಧರ್ಮಸಿಂಗ್

Bengaluru Urban:

Font size:

- 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಹಿರಿಯೂರಿನ ₹244 ಕೋಟಿ ಕೆರೆ ತುಂಬಿಸುವ ಯೋಜನೆಗೆ ನಾಳೆ ಭೂಮಿಪೂಜೆ: ಡಾ. ಅಜಯ್ ಧರ್ಮಸಿಂಗ್

- 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ
- 0.307 ಟಿಎಂಸಿ ನೀರು ಬಳಸಿ ಜವನಗೊಂಡನಹಳ್ಳಿ ಹೋಬಳಿಯ ಜಲಮೂಲಗಳ ಪುನಶ್ಚೇತನ

ಬೆಂಗಳೂರು/ಚಿತ್ರದುರ್ಗ, ನವೆಂಬರ್ 2: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸುವ ಮತ್ತು ಅಂತರ್ಜಲ ಅಭಿವೃದ್ಧಿಪಡಿಸುವ ₹244 ಕೋಟಿ ಮೊತ್ತದ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ನವೆಂಬರ್ 3ರಂದು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.

ಹಿರಿಯೂರು ತಾಲೂಕಿನ ದಿಂಡಾವರ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಂಗಳವಾರ ಮಧ್ಯಾಹ್ನ 12.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಸೇರಿದಂತೆ ಸಚಿವರು, ಜನಪ್ರತಿನಿಧಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜವನಗೊಂಡನಹಳ್ಳಿ ಹೋಬಳಿಯಲ್ಲಿ ನಿರಂತರ ಬರ ಪರಿಸ್ಥಿತಿ, ಕೆರೆಗಳಲ್ಲಿ ನೀರಿನ ಕೊರತೆ ಹಾಗೂ ಅಂತರ್ಜಲ ಮಟ್ಟ ಕುಸಿತದ ಹಿನ್ನೆಲೆಯಲ್ಲಿ ಈ ಯೋಜನೆ ರೂಪಿಸಲಾಗಿದೆ. ಈ ಭಾಗದಲ್ಲಿ ಅಂತರ್ಜಲಕ್ಕಾಗಿ ಸುಮಾರು 1,000 ಅಡಿ ಆಳದವರೆಗೆ ಕೊಳವೆಬಾವಿ ಕೊರೆಯಬೇಕಾದ ಪರಿಸ್ಥಿತಿ ಎದುರಾಗಿರುವುದರಿಂದ, ದೀರ್ಘಕಾಲಿಕ ಜಲಭದ್ರತೆ ಕಲ್ಪಿಸುವ ಉದ್ದೇಶದಿಂದ ಕೆರೆ ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ಯೋಜನೆಯಡಿ 0.307 ಟಿಎಂಸಿ ನೀರನ್ನು ಬಳಸಿ ಒಟ್ಟು 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸಲಾಗುತ್ತದೆ. ಇದರಲ್ಲಿ ಸಣ್ಣ ನೀರಾವರಿ ಇಲಾಖೆಯ 10 ಕೆರೆಗಳು ಹಾಗೂ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 6 ಕೆರೆಗಳು ಸೇರಿವೆ.

ವೇದಾವತಿ ನದಿಗೆ ಅಡ್ಡಲಾಗಿ Submersible Diversion Weir ನಿರ್ಮಿಸಿ, ಜಾಕ್‌ವೆಲ್ ಮತ್ತು ಪಂಪ್‌ಹೌಸ್ ಮೂಲಕ ನೀರನ್ನು ಎತ್ತಿ ಕೆರೆಗಳಿಗೆ ಪೂರೈಸುವ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಯೋಜನೆಯಡಿ 2000 HP ಸಾಮರ್ಥ್ಯದ VT ಪಂಪುಗಳು, ಸುಮಾರು 28.13 ಕಿ.ಮೀ. MS ಪೈಪ್‌ಲೈನ್ ಹಾಗೂ 16.82 ಕಿ.ಮೀ. HDPE ಪೈಪ್‌ಲೈನ್ ನಿರ್ಮಿಸಲಾಗುತ್ತದೆ.

“ಬರಪೀಡಿತ ಪ್ರದೇಶಗಳಲ್ಲಿ ಕೆರೆಗಳನ್ನು ತುಂಬಿಸಿ ಅಂತರ್ಜಲವನ್ನು ಪುನಶ್ಚೇತನಗೊಳಿಸುವುದು ನಮ್ಮ ಇಲಾಖೆಯ ಪ್ರಮುಖ ಆದ್ಯತೆಯಾಗಿದೆ. ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಈ ₹244 ಕೋಟಿ ಯೋಜನೆಗೆ ಚಾಲನೆ ದೊರೆಯುತ್ತಿರುವುದು ಹಿರಿಯೂರು ಭಾಗದ ಜನರಿಗೆ ಮಹತ್ವದ ಹೆಜ್ಜೆಯಾಗಿದೆ. ಕೆರೆಗಳು ತುಂಬುವುದರಿಂದ ಕುಡಿಯುವ ನೀರಿನ ಭದ್ರತೆ, ಅಂತರ್ಜಲ ಮಟ್ಟ ಸುಧಾರಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಹಕಾರವಾಗಲಿದೆ,” ಎಂದು ಡಾ. ಅಜಯ್ ಧರ್ಮಸಿಂಗ್ ಹೇಳಿದ್ದಾರೆ.

ಯೋಜನೆಗೆ 2026ರ ಜುಲೈ 21ರಂದು ₹244 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿಯನ್ನು 30 ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

“ಸಣ್ಣ ನೀರಾವರಿ ಯೋಜನೆಗಳು ಕೇವಲ ನೀರಾವರಿ ಸೌಲಭ್ಯಕ್ಕೆ ಸೀಮಿತವಾಗಿರುವುದಿಲ್ಲ. ಅವು ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ಭದ್ರತೆ, ಅಂತರ್ಜಲ ಪುನರ್ಭರ್ತಿ ಮತ್ತು ರೈತರ ಜೀವನೋಪಾಯಕ್ಕೆ ನೇರವಾಗಿ ಸಂಬಂಧಿಸಿದ ಮೂಲಸೌಕರ್ಯ. ಈ ಯೋಜನೆಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ,” ಎಂದು ಸಚಿವರು ತಿಳಿಸಿದ್ದಾರೆ.

Comments

Leave a Comment

Prev Post ಸ್ಟಿಂಗ್ ವಿಡಿಯೋದಲ್ಲಿರುವ ಕೇರಳ ಮಹಿಳೆ ಸಿದ್ದರಾಮಯ್ಯ ವಿರುದ್ಧದ ಪಿತೂರಿಯ ಭಾಗ,ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಹೇಳಿಕೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News