PRABHAVAA.COM

ಸರಕಾರಿ ಶಾಲೆಗಳಿಗೆ ಸಿಎಸ್ಆರ್ ನೆರವು ಕೂಡ ಒಂದು ಹೂಡಿಕೆ: ಉದ್ಯಮಿಗಳಿಗೆ ಸಚಿವ ಎಂ ಬಿ ಪಾಟೀಲ ಕರೆ

Bengaluru Urban:

Font size:

ಸರಕಾರಿ ಶಾಲೆಗಳಿಗೆ ಸಿಎಸ್ಆರ್ ನೆರವು ಕೂಡ ಒಂದು ಹೂಡಿಕೆ: ಉದ್ಯಮಿಗಳಿಗೆ ಸಚಿವ ಎಂ ಬಿ ಪಾಟೀಲ ಕರೆ

ಸರಕಾರಿ ಶಾಲೆಗಳಿಗೆ ಸಿಎಸ್ಆರ್ ನೆರವು ಕೂಡ ಒಂದು ಹೂಡಿಕೆ: ಉದ್ಯಮಿಗಳಿಗೆ ಸಚಿವ ಎಂ ಬಿ ಪಾಟೀಲ ಕರೆ

ಬೆಂಗಳೂರು: ಕೈಗಾರಿಕೆಗಳು ಉಜ್ಜ್ವಲ ಬೆಳವಣಿಗೆಯ ದೂರದೃಷ್ಟಿಯಿಂದ ತಮ್ಮ ಸುತ್ತಮುತ್ತ ಇರುವ ಗ್ರಾಮೀಣ ಮತ್ತು ಸರಕಾರಿ ಶಾಲೆಗಳಿಗೆ ತಮ್ಮ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಸಿಎಸ್ಆರ್ ನೆರವು ನೀಡಬೇಕು. ಇದೂ ಕೂಡ ಒಂದು ಹೂಡಿಕೆ ಎಂದೇ ತಿಳಿಯಬೇಕು. ಇದಕ್ಕಾಗಿ ಸರಕಾರವು `ನನ್ನ ಶಾಲೆ, ನನ್ನ ಜವಾಬ್ದಾರಿ’ ಉಪಕ್ರಮವನ್ನು ಆರಂಭಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ `ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ಸಿಎಸ್ಆರ್ ಪಾಲುದಾರಿಕೆ’ ಕುರಿತು ಬುಧವಾರ ಏರ್ಪಡಿಸಿದ್ದ ಉದ್ಯಮಿಗಳು/ಸಿಇಒಗಳ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು.

ಸಭೆಯಲ್ಲಿ ನೆರೆದಿದ್ದ 150ಕ್ಕೂ ಹೆಚ್ಚು ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದ ಪಾಟೀಲ ಅವರು, ಸರಕಾರದ ಆಸಕ್ತಿಯಿಂದಾಗಿ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಹೊಸಹೊಸ ಉದ್ಯಮಗಳು ಬರುತ್ತಿವೆ. ಈ ಮೂಲಕ ಕೈಗಾರಿಕೆ ಮತ್ತು ಶಿಕ್ಷಣ ಎರಡೂ ಜತೆಜತೆಯಾಗಿ ಬೆಳವಣಿಗೆ ಹೊಂದುತ್ತಿವೆ. ರಾಜ್ಯದ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ಕೊಡುವ ಜವಾಬ್ದಾರಿಯನ್ನು ಸರಕಾರ ಹೊತ್ತುಕೊಂಡಿದೆ. ಇದಕ್ಕೆ ಉದ್ಯಮಗಳ ಸಹಕಾರ ಕೂಡ ಬೇಕು ಎಂದು ಅವರು ತಿಳಿಸಿದ್ದಾರೆ.

ಶಾಲೆಯಲ್ಲಿ ಆಧುನಿಕ ಕಲಿಕಾ ಪರಿಕರಗಳು, ನೈರ್ಮಲ್ಯ, ತರಬೇತಿ ಪಡೆದ ಶಿಕ್ಷಕರು, ಡಿಜಿಟಲ್ ಕಲಿಕೆ ಎಲ್ಲವೂ ಇರುವಂತೆ ಸರಕಾರ ನೋಡಿಕೊಳ್ಳುತ್ತಿದೆ. ರಾಜ್ಯವು ತಂತ್ರಜ್ಞಾನ ಮತ್ತು ಉತ್ತಮ ಶಿಕ್ಷಣ ಎರಡರಲ್ಲೂ ಅಗ್ರಪಂಕ್ತಿಯಲ್ಲಿದೆ. ಇದರ ಫಲವಾಗಿ ರಾಜ್ಯದಲ್ಲಿ ಇಂದು 20 ಸಾವಿರಕ್ಕೂ ಹೆಚ್ಚು ಚಿಪ್ ವಿನ್ಯಾಸಕಾರರು ಸಕ್ರಿಯರಾಗಿದ್ದಾರೆ. ಜತೆಗೆ ಈ ವಲಯದಲ್ಲಿ 1 ಲಕ್ಷ ಪಿಎಚ್.ಡಿ. ಮಹಾಪ್ರಬಂಧಗಳು ಬಂದಿದ್ದು, ದೇಶದ ಒಟ್ಟು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಶೀನ್ ಲರ್ನಿಂಗ್ ವಲಯಗಳಲ್ಲಿ ಶೇಕಡ 50ಕ್ಕಿಂತ ಹೆಚ್ಚು ಪಾಲನ್ನು ರಾಜ್ಯವೇ ಹೊಂದಿದೆ ಎಂದು ಅವರು ನುಡಿದಿದ್ದಾರೆ.

ನಾವು ನಾಲ್ಕನೇ ಹಂತದ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಿದ್ಯಾರ್ಥಿಗಳಿಗೆ ಮೊದಲಿನಿಂದಲೇ ಎಐ ಮತ್ತು ಐಒಟಿ ಎರಡಕ್ಕೂ ಸಂಬಂಧಿಸಿದಂತೆ ತರಬೇತಿ ಕೊಡುತ್ತಿದ್ದೇವೆ. ಇದಕ್ಕಾಗಿ ಸರಕಾರವು ಸೀಮನ್ಸ್ ತರಹದ ಅಗ್ರಗಣ್ಯ ಕಂಪನಿಗಳ ಜತೆ ಸಹಭಾಗಿತ್ವ ಏರ್ಪಡಿಸಿಕೊಂಡಿದ್ದೇವೆ. ಸಿಎಸ್ಆರ್ ನಿಧಿಯ ಪರಿಣಾಮಕಾರಿ ಬಳಕೆಯನ್ನು ಸುಗಮವಾಗಿಸಲು `ಕರ್ನಾಟಕ ಉದ್ಯೋಗ ಮಿತ್ರ’ ವಿಭಾಗವು ಶಿಕ್ಷಣ ಇಲಾಖೆಯ ಜತೆ ಕೆಲಸ ಮಾಡಲಿದೆ ಎಂದು ಪಾಟೀಲ ಭರವಸೆ ನೀಡಿದ್ದಾರೆ.

Comments

Leave a Comment

Prev Post ಬೆಲೆ ಏರಿಕೆ ವಿರುದ್ಧ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News